ನೇಣು ಬಿಗಿದು ದಂಪತಿ ಆತ್ಮಹತ್ಯೆ

by


ಶಿರಸಿ: ನೇಣು ಬಿಗಿದುಕೊಂಡು ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಮರಾಠಿಕೊಪ್ಪದ ಕುಂಬ್ರಿತಗ್ಗಿನಲ್ಲಿ ಶುಕ್ರವಾರ ನಡೆದಿದೆ.

ರಾಘವೇಂದ್ರ ನಾಯ್ಕ (34) ಹಾಗೂ ಬೇಬಿ ನಾಯ್ಕ (30) ಆತ್ಮಹತ್ಯೆ ಮಾಡಿಕೊಂಡ ದಂಪತಿ. ಮಗು ಅಳುತ್ತಿರುವುದನ್ನು ಗಮನಿಸಿದ ಅಕ್ಕಪಕ್ಕದವರು ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.