38 ಡಿಗ್ರಿ ಸೆಲ್ಸಿಯಸ್ ಗೆ ಏರಿದ ಶಿರಸಿ ತಾಪಮಾನ

by

ಮಳೆಯ ಪ್ರಮಾಣ ಕಡಿಮೆ ಆಗಿದ್ದು ಅಲ್ಲದೇ ಬಿರುಬೇಸಿಗೆಯನ್ನು ಎದುರಿಸುವ ಪರಿಸ್ಥಿತಿ ರಾಜ್ಯಾದ್ಯಂತ ಕಂಡುಬರುತ್ತಿದೆ. ಶಿರಸಿಯೂ ಕೂಡ ಈ ಸಮಸ್ಯೆಗಳಿಂದ ಹೊರತಾಗಿಲ್ಲದೇ, ನಿನ್ನೆ ಮದ್ಯಾಹ್ನದ ವೇಳೆಗೆ 38 ಡಿಗ್ರಿ ಸೆಲ್ಸಿಯಸ್ ಗೆ ಏರಿ ಅತ್ಯಧಿಕ ತಾಪಮಾನವನ್ನು ದಾಖಲಿಸಿದೆ.
ಶಿರಸಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಈಗಾಗಲೇ ನೀರಿನ ಪ್ರಮಾಣ ಅತ್ಯಂತ ಕಡಿಮೆ ಇದ್ದು, ಇನ್ನು ಎರಡು ತಿಂಗಳು ಇದೇ ಪರಿಸ್ಥಿತಿ ಮುಂದುವರಿದಲ್ಲಿ ಸಾಕಷ್ಟು ಸಮಸ್ಯೆ ಎದುರಿಸಬೇಕಾಗುತ್ತದೆ.
www.Sirsi.Info